News

ಮುಂಬೈ: ಟೆಸ್ಟ್ ಕ್ರಿಕೆಟ್ ನಲ್ಲೂ ರೋಹಿತ್ ಆರಂಭಿಕರಾಗಿ ಕಣಕ್ಕಿಳಿಯಲಿ-ದಾದ

ಮುಂಬೈ, ಆ 22 (DaijiworldNews/SM): ಇತ್ತೀಚೆಗೆ ಅಂತ್ಯಗೊಂಡ ವಿಶ್ವಕಪ್ ಸರಣಿಯಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಕ್ರಿಕೆಟ್ ಪ್ರೇಮಿಗಳನ್ನು ರಂಜಿಸಿದ್ದ ರೋಹಿತ್ ಶರ್ಮಾ ಅವರನ್ನು ಟೆಸ್ಟ್ ಕ್ರಿಕೆಟ್ ನಲ್ಲೂ ಆರಂಭಿಕರಾಗಿ ಕಣಕ್ಕಿಳಿಸಬೇಕೆಂದು ಮಾಜಿ ನಾಯಕ ಸೌರವ್ ಗಂಗೂಲಿ ತಿಳಿಸಿದ್ದಾರೆ.

ರೋಹಿತ್ ಶರ್ಮಾ ಟೀಂ ಇಂಡಿಯಾದ ಯಶಸ್ವಿ ನಾಯಕರಾಗಿದ್ದಾರೆ. ನಿಗದಿತ ಓವರ್ ಗಳ ಪಂದ್ಯಗಳಲ್ಲಿ ಉತ್ತಮವಾದ ಪ್ರದರ್ಶನಗಳನ್ನು ನೀಡುತ್ತಿದ್ದಾರೆ. ಅಲ್ಲದೆ ಟೀಂ ಇಂಡಿಯಾಕ್ಕೆ ಆರಂಭಿಕರಾಗಿ ಉತ್ತಮ ಅಡಿಪಾಯವನ್ನು ಹಾಕುತ್ತಿದ್ದಾರೆ. ಹೀಗಿರುವ ಸಂದರ್ಭ ಅವರನ್ನು ಟೆಸ್ಟ್ ಕ್ರಿಕೆಟ್ ನಲ್ಲೂ ಆರಂಭಿಕರನ್ನಾಗಿ ಕಣಕ್ಕಿಳಿಸುವಂತೆ ದಾದ ಸಲಹೆ ನೀಡಿದ್ದಾರೆ.

ರೋಹಿತ್ ಶರ್ಮಾ ಏಕದಿನ ಮಾದರಿಯಲ್ಲಿ ಮೂರು ಬಾರಿ ದ್ವಿಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟ್ಸ್ ಮನ್ ಆಗಿದ್ದಾರೆ. ಆದರೆ, ಟೆಸ್ಟ್ ಕ್ರಿಕೆಟ್ ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ರೋಹಿತ್ ಇನ್ನೂ ಯಶಸ್ಸು ಕಂಡುಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಆರಂಭಿಕರನ್ನಾಗಿಯೇ ಟೆಸ್ಟ್ ನಲ್ಲೂ ಕಣಕ್ಕಿಳಿಸಿದ್ದಲ್ಲಿ ಉತ್ತಮ ಪ್ರದರ್ಶನ ನೀಡಿಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.