News

ಇಲ್ಯಾಸ್ ಹತ್ಯೆ ಪ್ರಕರಣ: ಆರೋಪಿಗಳ ಸುಳಿವು ಲಭ್ಯ - ಟಿ.ಆರ್ ಸುರೇಶ್

ಮಂಗಳೂರು, ಜ 13: ಉಳ್ಳಾಲ ಟಾರ್ಗೆಟ್ ಗ್ರೂಪ್‌ನಲ್ಲಿ ಕುಖ್ಯಾತ ರೌಡಿಯಾಗಿದ್ದ ಇಲ್ಯಾಸ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದೆ ಎಂದು ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ತಿಳಿಸಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಯಾಸ್ ಜೈಲಿನಿಂದ ಮೂರು ದಿನಗಳ ಹಿಂದೆ ಬಿಡುಗಡೆಗೊಂಡಿದ್ದರು. ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದ್ದು, ಇಲ್ಯಾಸ್ ಅವರ ಪತ್ನಿ ನೀಡಿದ ದೂರಿನ ಪ್ರಕಾರ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈಗಾಗಲೇ ಇಲ್ಯಾಸ್ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿದೆ ಎಂದು ತಿಳಿದ್ದಾರೆ.