News

ನಾನು ಹಿಂದೂ, ನನ್ನ ಬಣ್ಣ ಕೇಸರಿ ಆದರೆ ಬಿಜೆಪಿ ಕೇಸರಿಯನ್ನು ರಾಜಕೀಯ ಲಾಭಕ್ಕೆ ಬಳಸುತ್ತಿದೆ - ಪ್ರತಿಭಾ ಕುಳಾಯಿ

ಉಡುಪಿ, ಫೆ 9: ನಾನು ಕೂಡಾ ಒಬ್ಬಳು ಹಿಂದೂ. ನನ್ನ ಬಣ್ಣ ಕೂಡಾ ಕೇಸರಿಯೇ. ಆದರೆ ಬಿಜೆಪಿಯವರು ಕೇಸರಿಯನ್ನು ರಾಜಕೀಯ ಲಾಭಕ್ಕೆ ಬಳಸುತ್ತಿದ್ದಾರೆ ಎಂದು ಸುರತ್ಕಲ್ ಕಾಂಗ್ರೆಸ್ ಕಾರ್ಪೋರೇಟರ್  ಪ್ರತಿಭಾ ಕುಳಾಯಿ ಆರೋಪಿಸಿದರು.

 ಉಡುಪಿಯ ಕಾರ್ಕಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಯಾರಿಗೆಲ್ಲ ಸಾಯಲು ಮನಸ್ಸಿದೆ ಅವರು ಸಂಘ ಪರಿವಾರ ಸೇರಿ. ದುಡಿಯಲು ಮನಸ್ಸಿಲ್ಲದವರು ಕೂಡ  ಸಂಘ ಪರಿವಾರ ಸೇರಿ. ಮರ್ಡರ್ ಮಾಡಿ ಬಂದ್ರೆ ಸಾಕು ಜೈಲಿನಲ್ಲಿ ನಿಮಗೆ ಎಷ್ಟು ಬೇಕೋ ಅಷ್ಟು ಅನ್ನ ಸಿಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಯಾರಾದರೂ ಹಿಂದುಗಳು ಸತ್ತರೆ ಸಾಕು ವಾಟ್ಸಪ್, ಫೇಸ್ ಬುಕ್ ನಲ್ಲಿ ಸತ್ತವರ ಬಗ್ಗೆ ಪ್ರಚಾರ ಮಾಡುತ್ತಾರೆ. ಇಷ್ಟು ಕೋಟಿ ಸಂಗ್ರಹ ಆಯ್ತು, ಅಷ್ಟು ಕೋಟಿ ಸಂಗ್ರಹ ಆಯ್ತು ಅಂತ ಪ್ರಚಾರ ಮಾಡುತ್ತಾರೆ. ಆದ್ರೆ ಸಂತ್ರಸ್ತ ಮನೆಯವರಿಗೆ ಒಂದು ರುಪಾಯಿ ಈವರೆಗೆ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.

ಕೊಲೆ ಮಾಡಿಸಿದ ಸಂಘ ಪರಿವಾರದವರು ಜೈಲಿಗೆ ಇಣುಕಿ ನೋಡಲು ಕೂಡ ಹೋಗುವುದಿಲ್ಲ. ಎಲ್ಲರೂ ಬಂದು ಹೋಗಿದ್ದಾರೆ, ಆದರೆ ಯಾರೂ ಏನೂ ಮಾಡಿಲ್ಲ ಎಂದು ಶರತ್ ಮಡಿವಾಳ ತಂದೆ ಹೇಳಿಕೆ ಕೊಟ್ಟಿದ್ದರು. ದೀಪಕ್ ರಾವ್ ಕೊಲೆಯಾದಾಗ ಕೋಟಿಗಟ್ಟಲೆ ಸಂಗ್ರಹ ಮಾಡಿದ್ದಾರೆ. ದೀಪಕ್ ರಾವ್ ಮನೆಯವರಿಗೆ ಇವತ್ತಿನವರೆಗೂ ಒಂದು ರೂಪಾಯಿ ಸಿಕ್ಕಿಲ್ಲ ಅಂತ ಹೇಳಿದ್ದಾರೆ.