News

ವೀರ ಕ್ರೀಡೆ ಕಂಬಳಕ್ಕೆ ತಡೆ ನೀಡಲು ಸಾಧ್ಯವಿಲ್ಲ - ಸುಪ್ರೀಂ ಕೋರ್ಟ್

ಮಂಗಳೂರು, ಫೆ 12: ಕರಾವಳಿಯ ಜನಪದ ಕ್ರೀಡೆ ಕಂಬಳ ವಿರುದ್ಧ ಪೆಟಾ ಸಲ್ಲಿಸಿರುವ ಅರ್ಜಿಯ ಮುಂದುವರಿದ ವಿಚಾರಣೆಯನ್ನು ನಡೆಸಿರುವ ಸುಪ್ರೀಂ ಕೋರ್ಟ್  ಕಂಬಳಕ್ಕೆ ತಡೆ ನೀಡಲು ನಿರಾಕರಿಸಿದೆ.

ಪೆಟಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಾರ್ಚ್ 14 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಕರ್ನಾಟಕ ಸರಕಾರ ಕಂಬಳಕ್ಕೆ ಅವಕಾಶ ನೀಡಿ ಹೊರಡಿಸಿರುವ ಅಧ್ಯಾದೇಶ ಈಗಾಗಲೇ ರಾಷ್ಟ್ರಪತಿ ಅಂಗಳದಲ್ಲಿದೆ ಎಂದು ರಾಜ್ಯ ಸರ್ಕಾರ ಕೋರ್ಟ್ ತಿಳಿಸಿದೆ. ಕಂಬಳ ಮಸೂದೆ ಕೂಡಾ ಇನ್ನೂ ಅನುಷ್ಠಾನಗೊಂಡಿಲ್ಲ. ಹೀಗಿರುವಾಗ, ಕಂಬಳ ನಡೆಸಲು ಅವಕಾಶ ನೀಡಬಾರದು ಎಂದು ಪೆಟಾ ಸಂಘಟನೆಯವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಸುಪ್ರೀಂ ಕೋರ್ಟ್ ಕಂಬಳಕ್ಕೆ ತಡೆ ನೀಡಲು ನಿರಾಕರಿಸಿದೆ.