News

ಮುಸ್ಲಿಮರಲ್ಲಿ ಹೆಚ್ಚಿನವರು ಎಸ್ ಡಿಪಿಐನವರು - ಮಾಜಿ ಮೇಯರ್ ಕವಿತಾ ಸನಿಲ್

ಮಂಗಳೂರು, ಮಾ 22: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲೆಂದು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಿಗೆ ಔತಣ ಕೂಟವನ್ನು ಏರ್ಪಡಿಸಲಾಗಿತ್ತು. ಈ ಔತಣಕೂಟದಲ್ಲಿ ಸಚಿವ ರಮಾನಾಥ ರೈ, ಜಿಲ್ಲಾ ಪಂಚಾಯತ್ ಸದಸ್ಯ ಮಹಮ್ಮದ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಈ ಸಂದರ್ಭದ ನಡೆದ ಮಾತುಕತೆಯಲ್ಲಿ ಸಚಿವ ಬಿ. ರಮಾನಾಥ ರೈ ಮುಂದೆ ಕವಿತಾ ಸನಿಲ್ ನಿಮ್ಮವರೆಲ್ಲರನ್ನೂ ನಂಬಲು ಸಾಧ್ಯವಿಲ್ಲ. ನಿಮ್ಮವರಲ್ಲಿ ಹೆಚ್ಚಿನವರು ಎಸ್ ಡಿಪಿಐ ಎಂದು ಹೇಳಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ.

 

ವಿರೋಧ ಪಕ್ಷ ಬಿಜೆಪಿಯಿಂದ ಎಸ್ ಡಿಪಿಐ ಹಾಗೂ ಪಿಎಫ್ ಐ ಬ್ಯಾನ್ ಮಾಡಬೇಕೆಂಬ ಸಾಕಷ್ಟು ಒತ್ತಾಯಗಳು ಕೇಳಿ ಬಂದಿದ್ದವು. ಆದರೆ, ಇದೀಗ ಕಾಂಗ್ರೆಸ್ ಪಕ್ಷದ ನಾಯಕಿ ಕವಿತಾ ಸನಿಲ್ ಅವರ ಮಾತುಗಳು ಚರ್ಚೆಗೆ ಗ್ರಾಸವಾಗಿದೆ.