News

ಭಾನುವಾರ ಜಿಲ್ಲೆ ಲಾಕ್‌ಡೌನ್‌ - ಮಂಗಳೂರಿನಲ್ಲಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರು

ಮಂಗಳೂರು, ಜು. 04 (DaijiworldNews/MB) : ನಾಳೆ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಆದೇಶ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಂಪೂರ್ಣ ಲಾಕ್‌ಡೌನ್‌ಗೆ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್‌ ಆದೇಶಿಸಿದ್ದಾರೆ. ಭಾನುವಾರ ಜಿಲ್ಲೆ ಲಾಕ್‌ಡೌನ್‌ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

8 ಗಂಟೆ ನಂತರ ಆಗಮಿಸುತ್ತಿರುವ ವಾಹನಗಳಿಗೆ ನಿರ್ಬಂಧ ಹೇರಲಾಗಿದ್ದು ಲಾಲ್‌ಬಾಗ್ ಬಳಿ ಬ್ಯಾರಿ ಕೇಡ್ ಅಳವಡಿಸಿ ಬಿಗಿ ಬಂದೋಬಸ್ತು ಮಾಡಲಾಗಿದೆ.

ನಗರ ಪ್ರವೇಶಿಸುವ ವಾಹನಗಳನ್ನು ತಡೆಯಲಾಗುತ್ತಿದ್ದು ನಗರದಿಂದ ಹೊರಹೋಗುವ ವಾಹನಗಳಿಗಷ್ಟೇ ಅವಕಾಶ ನೀಡಲಾಗುತ್ತಿದೆ.

ಭಾನುವಾರ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್‌ ಇದ್ದು ಈಗಾಗಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.