News

ಯೋಗಿ ಬಂದರೆ ಚಪ್ಪಲಿಯಲ್ಲಿ ಹೊಡೆಯಬೇಕಂತೆ- ದಿನೇಶ್‌ ಗುಂಡೂರಾವ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು, ಏ 15 : ಉತ್ತರ ಪ್ರದೇಶದಲ್ಲಿ ತಮ್ಮದೇ ಪಕ್ಷದ ಶಾಸಕನ ರಕ್ಷಣೆಗಾಗಿ , ಯುವತಿ ಮೇಲೆ ಅತ್ಯಾಚಾರ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ಹೇಳಿಕೆಯನ್ನು ರಾಜ್ಯ ಬಿಜೆಪಿ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

ಪಕ್ಷದ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯೋಗಿ ಅಲ್ಲ ಭೋಗಿ,ಡೋಂಗಿ ಅದಿತ್ಯನಾಥ್ ಮುಖ್ಯಮಂತ್ರಿ ಸ್ಥಾನದಲ್ಲಿರಲು ಅವನು ನಾಲಾಯಕ್‌. ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು’ ಎಂದು ಏಕವಚನದಲ್ಲೇ ಸಂಬೋಧಿಸಿದರು.
ಯೋಗಿ ಅದಿತ್ಯನಾಥ್ ಕರ್ನಾಟಕಕ್ಕೆ ಬಂದರೆ, ರಾಜ್ಯಕ್ಕೆ ಅವಮಾನವಾಗುತ್ತದೆ, ಅವನು ಏನಾದರೂ ರಾಜ್ಯಕ್ಕೆ ಬಂದರೆ ಚಪ್ಪಲಿಯಿಂಡ ಹೊಡೆಯಿರಿ ಎಂದು ವಿವಾದಾತ್ಮಕ ಮಾತುಗಳನ್ನು ಆಡಿದ್ದರು.
ಈ ವೇಳೆ ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌, ಯುವ ಕಾಂಗ್ರೆಸ್‌ ನಗರ ಉಪಾಧ್ಯಕ್ಷೆ ಸೌಮ್ಯಾರೆಡ್ಡಿ ಸೇರಿದಂತೆ ಹಲವರು ಹಾಜರಿದ್ದರು.