News

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ವೈ

ಮೇ 17: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪದಗ್ರಹಣ ಸಮಾರಂಭಕ್ಕೆ ತಡೆನೀಡಬೇಕೆಂಬ ಕಾಂಗ್ರೆಸ್, ಜೆಡಿಎಸ್ ಮನವಿಯನ್ನು ಮುಂಜಾನೆ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ನಕಾರ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ನಿಗದಿಯಂತೆ ಗುರುವಾರ ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಮತ್ತು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಂದರ್ಭ ಹಲವಾರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. 

ಬಿಎಸ್ ವೈ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ನೆರೆದಿದ್ದ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು, ಮೋದಿ, ಮೋದಿ ಎಂದು ಹರ್ಷೋದ್ಘಾರ ವ್ಯಕ್ತಪಡಿಸಿದರು.